Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ದೊಡ್ಡಹುಲ್ಲೂರು ಗ್ರಾಮ ಪಂಚಾಯತಿಯಲ್ಲಿ ‘ವಿಶೇಷ ಜಾಬ್ ಕಾರ್ಡ್ ಮೇಳ’ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಜಾಗೃತಿ ಸಭೆ

Share

​ಹೊಸಕೋಟೆ : ಗ್ರಾಮೀಣ ಭಾಗದ ಕುಟುಂಬಗಳಿಗೆ ಆರ್ಥಿಕ ಭದ್ರತೆ ಹಾಗೂ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ದೊಡ್ಡಹುಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ – ಗ್ರಾಮೀಣ ಉದ್ಯೋಗ ಭರವಸೆ ಯೋಜನೆ (ವಿಬಿ ಜಿ ರಾಮ್ ಜಿ ) ಕುರಿತು ಸಾರ್ವಜನಿಕ ಜಾಗೃತಿ ಸಭೆ ಹಾಗೂ “ವಿಶೇಷ ಜಾಬ್ ಕಾರ್ಡ್ ಮೇಳ”ವನ್ನು ಆಯೋಜಿಸಲಾಗಿತ್ತು.
​ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಶ್ಮಿ ರವರು, “ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬಕ್ಕೂ ಕನಿಷ್ಠ ಉದ್ಯೋಗ ಭರವಸೆ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ನಮ್ಮ ಊರಿನ ಕೆರೆಗಳ ಹೂಳೆತ್ತುವುದು, ರಸ್ತೆ ಹಾಗೂ ಕಾಲುವೆ ನಿರ್ಮಾಣ, ತೋಟಗಾರಿಕೆ ಮತ್ತು ಶಾಲಾ-ಸಮುದಾಯ ಆಸ್ತಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಗ್ರಾಮೀಣ ಕಾರ್ಮಿಕರು ಸಕ್ರಿಯವಾಗಿ ತೊಡಗಿಸಿಕೊಂಡು ಉದ್ಯೋಗದ ಹಕ್ಕನ್ನು ಪಡೆಯಬಹುದು” ಎಂದು ತಿಳಿಸಿದರು.
​ಯೋಜನೆಯ ಲಾಭ ಪ್ರತಿಯೊಬ್ಬರಿಗೂ ತಲುಪಲಿ ಎಂಬ ಆಶಯದೊಂದಿಗೆ ಆಯೋಜಿಸಲಾಗಿರುವ ಜಾಬ್ ಕಾರ್ಡ್ ಮೇಳದ ಕುರಿತು ಮಾಹಿತಿ ನೀಡಿ, “ಇದುವರೆಗೆ ಜಾಬ್ ಕಾರ್ಡ್ ಹೊಂದಿಲ್ಲದ ಹೊಸ ಕುಟುಂಬಗಳು ಹಾಗೂ ಹಳೆಯ ಕಾರ್ಡ್ ನವೀಕರಣ (ಅಪ್ಡೇಟ್) ಮಾಡಿಸಬೇಕಾದವರು ಈ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಅರ್ಹರು ಆಧಾರ್ ಕಾರ್ಡ್ ನಕಲು, ಬ್ಯಾಂಕ್ ಖಾತೆ ಪುಸ್ತಕದ ನಕಲು ಮತ್ತು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಆಗಮಿಸಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು” ಎಂದು ಮನವಿ ಮಾಡಿದರು.
​ಕೂಲಿ ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು, ಗ್ರಾಮಸ್ಥರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಈ ಮೇಳ ಸಹಕಾರಿಯಾಗಲಿದ್ದು, ಪಂಚಾಯತಿಯ ಎಲ್ಲಾ ಅರ್ಹ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಜನೆಯ ಪ್ರಯೋಜನ ಪಡೆಯಬೇಕಾಗಿ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Written by

Bayalu Simha

Leave a Reply

Your email address will not be published. Required fields are marked *