ಸಂಡೂರು: ಪಟ್ಟಣದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಗುರುಗಳಾದ ಟಿ. ರಮೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಕೆ.ಕೆ. ಮೆಹಬೂಬ್ ಬಾಷ, ಸಹ ಶಿಕ್ಷಕರಾದ ರಾಮಕೃಷ್ಣ, ದೈಹಿಕ ಶಿಕ್ಷಕಿ ಶ್ರೀಮತಿ ಅನಿತಾ ರಾಣಿ, ಶಿಕ್ಷಕಿ ರೇಖಾ ಹಾಗೂ ಕರಾಟೆ ಶಿಕ್ಷಕರಾದ ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.
ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ನಿರಂತರ ತರಬೇತಿ ಮತ್ತು ಪ್ರೋತ್ಸಾಹ ನೀಡುತ್ತಿರುವ ಶಿಕ್ಷಕರ ಕಾರ್ಯಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಶಾಲೆಗೆ ಪ್ರಥಮ ಸ್ಥಾನ
