ತಾಲ್ಲೂಕಿನ ತಂಡೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ, ಎಸ್ಡಿಎಂಸಿ ಸದಸ್ಯರು, ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ವಿವಿಧ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಸೇರಿದಂತೆ ವಿವಿಧ ಶೈಕ್ಷಣಿಕ ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಯಿತು.
ಇದರೊಂದಿಗೆ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದ ದಾನಿಗಳು ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳನ್ನು ನೀಡಿ ಪ್ರೋತ್ಸಾಹಿಸಿದರು.
ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಾಲರಾಜ್ ಅವರು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಪ್ರೇರೇಪಿಸುವ ಉದ್ದೇಶದಿಂದ ಕ್ರೀಡಾ ಶೈಲಿಯ ಶರ್ಟ್ಗಳನ್ನು ವಿತರಿಸಿದರು.
ತೆಂಡೆಕೆರೆ ಕಟ್ಟಡ ಗುತ್ತಿಗೆದಾರರಾದ ಕೇಶವಮೂರ್ತಿ ಅವರು ವಿದ್ಯಾರ್ಥಿಗಳಿಗೆ ಟ್ರ್ಯಾಕ್ಸೂಟ್ಗಳನ್ನು ವಿತರಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಅವರು ಶಾಲೆಗೆ ಬ್ಯಾಂಡ್ಸೆಟ್ನ್ನು ಕೊಡುಗೆಯಾಗಿ ನೀಡಿದರು.
ಅಂಚನಹಳ್ಳಿ ಯೋಗೇಶ್ ಅವರು 8, 9 ಮತ್ತು 10ನೇ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು.
ಮಿಲ್ ನಂಜೇಗೌಡ ಅವರು ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳು ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿದರು.
ಶಾಲೆಯ ಅಭಿವೃದ್ಧಿಗೆ ಮಹದೇವಪ್ಪ, ಜರಿನಾಬೇಗಂ, ಸುರೇಶ್, ಗೋಪಾಲ್, ಮಂಜೇಗೌಡ, ಪಿಯುಸಿ ಉಪನ್ಯಾಸಕರಾದ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ, ಈಶ್ವರ್, ಹೊಸೂರು ಯೋಗ, ತಗಡೂರು ರವೀಂದ್ರ ಕುಮಾರ್, ದಿನೇಶ್ ಪ್ಯಾರಿ, ನಯಾರ ಪೆಟ್ರೋಲ್ ಬಂಕ್ ಮಾಲೀಕರಾದ ಅಂಚನಹಳ್ಳಿ ಯೋಗೇಶ್ ಹಾಗೂ ಹಾದನೂರು ಡೈರಿ ಸೆಕ್ರೆಟರಿ ನಾಗೇಗೌಡ ಸೇರಿದಂತೆ ಹಲವರು ಆರ್ಥಿಕ ಹಾಗೂ ವಿವಿಧ ರೀತಿಯ ಸಹಕಾರ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಸತೀಶ್ ಮಾತನಾಡಿ ಶಾಲೆಯ ಅಭಿವೃದ್ಧಿಗೆ ದಾನಿಗಳು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಗಳು ಅತ್ಯಂತ ಮಹತ್ವದ್ದಾಗಿದ್ದು, ಸಮಾಜದ ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು.
ನಂತರ ಶಾಲೆಯ ಮುಖ್ಯ ಶಿಕ್ಷಕಿ ರೇಖಾ ಪಿ.ಆರ್. ಅವರು ಮಾತನಾಡಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಎಲ್ಲಾ ದಾನಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ದಾನಿಗಳು, ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿಯೋಂದಿಗೆ: ಸಾಯಿಕುಮಾರ್. ಎನ್. ಕೆ
