ಭಚಿಕ್ಕಬಳ್ಳಾಪುರ: ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಶುದ್ಧೀಕರಣ ಮಾಡಿದ ಘಟನೆ ಹಾಗೂ ಇದರ ವಿರುದ್ಧ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಶನಿವಾರ ನಗರದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಯಿತು.
ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ,ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧೀಕರಣ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.ಇದೇ ವಿಚಾರವಾಗಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನೂ ತೀವ್ರವಾಗಿ ಖಂಡಿಸಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ವಕೀಲ ನಾರಾಯಣಸ್ವಾಮಿ ಮಾತನಾಡಿ,ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ್ದರು.ಆದರೆ,ಬಿಜೆಪಿ ಅಸ್ಪೃಶ್ಯತೆಯನ್ನು ಪ್ರೋತ್ಸಾಹಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ, ಎಲ್ಲ ಜಾತಿ ಧರ್ಮದ ಜನರೂ ಸಮಾನರು ಎಂಬುದನ್ನು ಸಂವಿಧಾನ ಸಾರುತ್ತದೆ. ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಆದರೆ,ಬಿಜೆಪಿ ಜಾತಿ ಹಾಗೂ ಧರ್ಮಗಳ ನಡುವೆ ವಿಷಬೀಜ ಬಿತ್ತಿ ಕೋಮುವಾದವನ್ನು ಹರಡುವ ಕೆಲಸ ಮಾಡುತ್ತಿದೆ ಎಂದು ದೂರಿದರು.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಮಾಡಿರುವುದು ಖಂಡನೀಯ.ಇದರ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನೂ ಖಂಡಿಸುವುದಾಗಿ ಹೇಳಿದರು.
ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಹಾಗೂ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರಚಾರ ಸಮಿತಿ ಉಸ್ತುವಾರಿ ಕೆ.ಪಿ.ಜಾನಿ ಮಾತನಾಡಿ, ಬಿಜೆಪಿ ದೇಶದಲ್ಲಿ ಕೋಮುವಾದವನ್ನು ಹರಡುತ್ತಿದೆ ಎಐಸಿಸಿ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧೀಕರಣ ವಿಧಿ ನಡೆಸಿರುವುದು ಬಿಜೆಪಿಯ ದ್ವೇಷದ ರಾಜಕಾರಣ ಹಾಗೂ ಸಮಾಜದಲ್ಲಿ ವಿಷಬೀಜ ಬಿತ್ತುವ ಮನೋಭಾವವನ್ನು ತೋರಿಸುತ್ತದೆ ಎಂದು ದೂರಿದರು.ಮಾಜಿ ಶಾಸಕಿ ಅನುಸೂಯಮ್ಮ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎನ್.ರಮೇಶ್,ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ನಾಯನಹಳ್ಳಿ ನಾರಾಯಣಸ್ವಾಮಿ, ಮಂಡಿಕಲ್ ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್,ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೇಸ್ ಸೂರಿ,ಉಪಾಧ್ಯಕ್ಷ ಹಾಗೂ ಮದಾರ ಮಹಾಸಭಾ ಅಧ್ಯಕ್ಷ ಪಟ್ರೇನಹಳ್ಳಿ ಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಕೀಲ ಮುನೇಗೌಡ,ಹಿರಿಯ ಕಾಂಗ್ರೆಸ್ ಮುಖಂಡ ಲಕ್ಷ್ಮಣ್,ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಮೀಮ್, ಮಂಗಳಪ್ರಕಾಶ್,ಮಂಚೇನಹಳ್ಳಿ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಮಸ್ತಾನ್ ಸಾಬ್,ಬಾಬಾ ಜಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳ ಶುದ್ಧೀಕರಣದ ವಿರುದ್ಧ ಹಾಗೂ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿ
