Skip to content
Monday, 5 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಚಿಂತಾಮಣಿಯಲ್ಲಿ ಸೆ.18ರಂದು ಜೆಡಿಎಸ್ ಕೋರ್ ಕಮಿಟಿ ಬೃಹತ್ ಸಮಾವೇಶ

Share

: ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿಯ ವಿ.ಪಿ. ಪ್ಯಾಲೇಸ್‌ನಲ್ಲಿ ಸೆ.18ರಂದು ಶುಕ್ರವಾರ ಜೆಡಿಎಸ್ ಕೋರ್ ಕಮಿಟಿಯ ಬೃಹತ್ ಸಮಾವೇಶ ನಡೆಯಲಿದ್ದು, ಕೋರ್ ಕಮಿಟಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾವೇಶದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ 600ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತಾ ಮುನಿಯಪ್ಪ ಹೇಳಿದರು.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂತಾಮಣಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮುಂಬರುವ ಎಲ್ಲ ಚುನಾವಣೆಗಳನ್ನು ಎದುರಿಸಲು ಪಕ್ಷವನ್ನು ಸಜ್ಜುಗೊಳಿಸುವುದು ಹಾಗೂ ಸಂಘಟನೆ ಬಲಪಡಿಸುವ ಕುರಿತು ಸಮಾವೇಶದಲ್ಲಿ ಭಾಷಣ ನಡೆಯಲಿದೆ ಎಂದು ತಿಳಿಸಿದರು.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗಬೇಕು ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಕಾಣಬೇಕು ಎಂಬುದು ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಜನರ ಆಶಯವಾಗಿದೆ ಎಂದರು.
ಸಮಾವೇಶದಲ್ಲಿ ಪಕ್ಷದ ಸಂಘಟನೆ,ಮುಂಬರುವ ಚುನಾವಣೆಗಳ ಸಿದ್ಧತೆ, ರೂಪುರೇಷೆಗಳ ಕುರಿತು ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರದ ಆಡಳಿತದ ಕುರಿತು ಪಕ್ಷದ ನಿಲುವು, ರೈತರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಪ್ರಶ್ನಿಸುವ ಕುರಿತು ಸಮಾವೇಶದಲ್ಲಿ ಚರ್ಚೆಯ ಪ್ರಮುಖ ವಿಷಯಗಳು
ಎಂದು ಮುಕ್ತಾ ಮುನಿಯಪ್ಪ ತಿಳಿಸಿದರು.
ಸಭೆಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಶಾ೦ತ್ ಮೂರ್ತಿ, ಪ್ರಕಾಶ್ ರೆಡ್ಡಿ, ನಾರಾಯಣಸ್ವಾಮಿ, ಸೂಣ್ಣೆಗೌಡ, ವಾಸು, ಕರಗಪ್ಪ, ಕುಮಾರ್, ಮಹೇಶ್, ಸುಂದರ್, ಅಜಿತ್, ಮೇಲೂರು ಅಮರ್, ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Written by

Bayalu Simha

Leave a Reply

Your email address will not be published. Required fields are marked *