Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಕಾಲದಲ್ಲಿ ಸಾಲ ಒದಗಿಸಿ ಆರ್ಥಿಕ ಸುಧಾರಣೆಗೆ ಶ್ರಮಿಸಲಾಗುವುದು : ಶಾಸಕ ಎಸ್.ಎನ್ ನಾರಾಯಣಸ್ವಾಮಿ

Share

​ಬಂಗಾರಪೇಟೆ: ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರ ಆಶಾಕಿರಣವಾಗಿರುವ ಡಿಸಿಸಿ ಬ್ಯಾಂಕ್ ಅನ್ನು ಪುನಃಶ್ಚೇತನಗೊಳಿಸುವ ಮೂಲಕ ಅರ್ಹ ರೈತರು, ಮಹಿಳಾ ಸ್ತ್ರೀಶಕ್ತಿ ಸಂಘಗಳು ಹಾಗೂ ಗ್ರಾಮೀಣ ಜನತೆಗೆ ಸಕಾಲದಲ್ಲಿ ಸಾಲ ಒದಗಿಸಿ ಆರ್ಥಿಕ ಸುಧಾರಣೆಗೆ ಶ್ರಮಿಸಲಾಗುವುದು ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ನಿಯಮಿತ ಅಧ್ಯಕ್ಷರು, ಕೋಲಾರ ಹಾಲು ಒಕ್ಕೂಟದ ನಿರ್ದೇಶಕರು ಮತ್ತು ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸ್ಥಳೀಯ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.

​ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಕಾರ್ಯಕ್ರಮ ಹಾಗೂ ಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಎರಡು ವರ್ಷಗಳಿಂದ ಬ್ಯಾಂಕಿನಿಂದ ಸಾಲ ನೀಡಲು ಸಾಧ್ಯವಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಖಾಸಗಿ ಫೈನಾನ್ಸ್‌ಗಳ ಅಧಿಕ ಬಡ್ಡಿಗೆ ಸಾಲ ಪಡೆದು ದಿವಾಳಿ ಹಂತ ತಲುಪಿದ್ದ ಜನರನ್ನು ರಕ್ಷಿಸಲು ಡಿಸಿಸಿ ಬ್ಯಾಂಕ್‌ಗೆ ಹೊಸ ಜೀವ ನೀಡಲಾಗುತ್ತಿದೆ ಎಂದರು.

​ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ಯಾವುದೇ ಆಮಿಷಗಳಿಗೆ ಒಳಗಾಗದೆ ಬಡವರು, ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಪಾರದರ್ಶಕ ಆಡಳಿತ ನೀಡಲಾಗುವುದು. ಸದ್ಯ ಬ್ಯಾಂಕ್‌ಗೆ 430 ಕೋಟಿ ರೂ. ಬಾಕಿ ಬರಬೇಕಿದ್ದು, ದಾಖಲೆಗಳನ್ನು ಪರಿಶೀಲಿಸಿ ಶೀಘ್ರವೇ ವಸೂಲಾತಿ ಮಾಡಿ, ಮರಳಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಮುಖ್ಯಮಂತ್ರಿಗಳ ಅನುಮತಿ ಲಭಿಸಿದರೆ ಅಪೆಕ್ಸ್ ಬ್ಯಾಂಕ್‌ನಿಂದ 300 ಕೋಟಿ ರೂ. ಠೇವಣಿ ತಂದು ಬ್ಯಾಂಕ್ ಬಲಪಡಿಸಲಾಗುವುದು ಹಾಗೂ ಬಾಗೇಪಲ್ಲಿ ತಾಲೂಕಿನ ಶಾಸಕರಾದ ಸುಬ್ಬಾರೆಡ್ಡಿರವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

​ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ. ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಗುಲ್ಲಹಳ್ಳಿ ನಾಗರಾಜ್, ಕೃಷ್ಣೆಗೌಡ,ಮಾಜಿ ಪುರಸಭಾ ಸದಸ್ಯ ಕೆ. ಚಂದ್ರಾರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಘು, ಡಿಸಿಸಿ ಬ್ಯಾಂಕ್ ನಿರ್ದೇಶಕ ರಂಗಾಚಾರಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾರ್ಥಸಾರಥಿ, ಉಪಾಧ್ಯಕ್ಷ ರಫೀಕ್,ಟಿಎಪಿಸಿಎಂಎಸ್ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಅ.ನಾ.ಹರೀಶ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದು, ಮೇಸ್ತ್ರಿ ಸೀನಪ್ಪ, ಮಾಜಿ ವ್ಯವಸ್ಥಾಪಕ ಚಂದ್ರಶೇಖರ್, ಗ್ರಾ.ಪಂ.ಅಧ್ಯಕ್ಷರಾದ ಶ್ರೀನಿವಾಸ್, ಆದಿನಾರಾಯಣ, ಕುಟ್ಟಿ ಹಾಗೂ ಮುಖಂಡರಾದ ಸುರೇಶ್, ಮಹದೇವ್, ಚಿಕ್ಕವಸಹಳ್ಳಿಮಂಜು, ಪಾರ್ಥಸಾರಥಿ,ಅಜ್ಜುಬೈ, ಅಮರೇಶ್, ಆನಂದ್, ನವೀನ ಗೌಡ,ಸಂದೀಪ್ ಗೌಡ, ರಾಮಕೃಷ್ಣ ರೆಡ್ಡಿ ಉಪಸ್ಥಿತರಿದ್ದರು.

Written by

Bayalu Simha

Leave a Reply

Your email address will not be published. Required fields are marked *