Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಪ್ರೇರಣಾತ್ಮಕ ಭಾಷಣ

Share

ಚೊಕ್ಕನಹಳ್ಳಿ; ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತಿಥಿ ಉಪನ್ಯಾಸಕರಿಂದ ವೃತ್ತಿ ಮಾರ್ಗದರ್ಶನ ಹಾಗೂ ಪ್ರೇರಣಾತ್ಮಕ ಭಾಷಣವನ್ನು ಏರ್ಪಡಿಸಲಾಗಿತ್ತು. ಅತಿಥಿಗಳ ಪರಿಚಯ ಹಾಗೂ ಸ್ವಾಗತ ಕೋರಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದ ಎನ್ ಅವರು ಪಿಯುಸಿ ಹಂತ ನಿಮ್ಮ ಬದುಕಿನ ಬಹಳ ಮುಖ್ಯವಾದ ಹಂತವಾಗಿದೆ. ಈ ಹಂತದಲ್ಲಿ ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಸ್ಪಷ್ಟ ಗುರಿಯೊಂದಿಗೆ ಜೀವನದಲ್ಲಿ ಮುಂದುವರಿಯಬೇಕು. ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಇವತ್ತು ಶಿಕ್ಷಣ ತಜ್ಞರು ಹಾಗೂ ಖ್ಯಾತ ವ್ಯಕ್ತಿತ್ವ ವಿಕಸನ ಉಪನ್ಯಾಸಕರಾದ ಡಾ.ಕೃಷ್ಣ ಬಿ ಎಸ್. ಅವರಿಂದ ಈ ಉಪನ್ಯಾಸವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ದೈಹಿಕ ನ್ಯೂನತೆಯಿದ್ದರೂ ಅದನ್ನು ಮೀರಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಡಾ.ಕೃಷ್ಣ ಅವರನ್ನು ಹೊಗಳಿದ ಅವರು ಶ್ರೀಯುತ ಕೃಷ್ಣ ಅವರ ವ್ಯಕ್ತಿತ್ವವೇ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿದ್ದು ಈಗ ನೀವು ಅವರ ಉಪನ್ಯಾಸದ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಹೇಳಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಕೃಷ್ಣ ಅವರು ವಿದ್ಯಾರ್ಥಿಗಳು ಉನ್ನತ ವ್ಯಾಸಂಗವನ್ನು ಮಾಡುವ ಸಂದರ್ಭದಲ್ಲಿ ಆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರ ಸಲಹೆ, ಮಾರ್ಗದರ್ಶನ ಪಡೆದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು. ಇದರಿಂದ ಮುಂದಿನ ವೃತ್ತಿ ಜೀವನದ ಬಗ್ಗೆ ಮಾಹಿತಿ ಸಿಗುವುದರ ಜೊತೆಗೆ ಅಪಾರ ಸಾಧನೆ ಮಾಡಲು ಅವಕಾಶವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಬಗ್ಗೆ ಮಾತನಾಡಿದ ಅವರು ಓದುವುದನ್ನು ಮುಂದೂಡಿದರೆ ಸಾಧನೆ ಮಾಡಲು ಸಾಧ್ಯವೇ ಇಲ್ಲ.ಹಾಗೆಯೇ ಏಕಾಗ್ರತೆಯಿಂದ ಓದುವುದು ಕೂಡ ಅತ್ಯಂತ ಅಗತ್ಯ ಎಂದು ಅವರು ಒತ್ತಿ ಹೇಳಿದರು.


ವಾಣಿಜ್ಯ ವಿಭಾಗದ ಮುಖ್ಯಸ್ಥೆಯಾದ ಸಿಬಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲಾವಣ್ಯ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಉಪನ್ಯಾಸದ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸವು ಯಶಸ್ವಿಯಾಗಿ ನಡೆಯಿತು.

Written by

Bayalu Simha

Leave a Reply

Your email address will not be published. Required fields are marked *