ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮದಲ್ಲಿ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಮತ್ತು ಗ್ರಾಮಸ್ಥರ ನೆರವಿನೊಂದಿಗೆ ನೂತನವಾಗಿ ನಿರ್ಮಿಸಲಾಗಿದ್ದ ಸಿದ್ಧಗಂಗಾ ಮಠದ ಲಿಂಗೈಕ್ಯ ಜಗದ್ಗುರು ಡಾ.ಶಿವಕುಮಾರ ಮಹಾಸ್ವಾಮೀಜಿ ಯವರ ಏಳೂವರೆ ಅಡಿ ಎತ್ತರದ ಭವ್ಯ ಪುತ್ತಳಿಯನ್ನು ಸಿದ್ದಗಂಗಾ ಮಠದ ಹಾಲಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಜಿ ಯವರು ಗುರುವಾರ ಲೋಕಾರ್ಪಣೆ ಮಾಡಿದರು.

ಇದೇ ವೇಳೆ ಗ್ರಾಮದ ಸುಗ್ಗಟ್ಟ-ಬೆಟ್ಟಹಲಸೂರು ಮುಖ್ಯ ರಸ್ತೆಯಲ್ಲಿ ಬರುವ ವೃತ್ತಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಎಂದು ಹೊಸ ನಾಮಕರಣ ಮಾಡಿ, ಲೋಕಾರ್ಪಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಬಳ್ಳನಪುರ ಸಂಸ್ಥಾನ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ, ರಾಜಾಪುರ ಮಠದ ಶ್ರೀ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಹುಣಸಮಾರನ ಹಳ್ಳಿ ಸಂಸ್ಥಾನ ಮಠದ ಶ್ರೀ ಗುರು ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಷಲಿಂಗ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಎಸ್.ಎಂ.ಎಲ್.ಪಿ ಉಮೇಶ್, ಬಿ ನಾಗರಾಜ್ ಬಾಬು, ಮಂಜುನಾಥ್ ಎಸ್.ಕೆ.ಬಿ., ಬೆಟ್ಟಹಲಸೂರು ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಗುರುಪ್ರಸಾದ್, ಎಂ.ಪಿ.ಮಲ್ಲೇಶ್, ಬಿ.ಎಸ್. ಅನಿಲ್ ಕುಮಾರ್, ಬಿ.ಬಸವರಾಜು, ನಾಗರಾಜ್, ಚಿತ್ರಶೇಖರ್, ಶರಣ ಬಸಪ್ಪ ಗಡಿಗೆ, ವೈಭವ್, ಗಂಗಾಧರ್, ಬಿ.ಎನ್.ನವೀನ್, ಚರಣ್ ರಾಜ್ ಸೇರಿದಂತೆ ಗ್ರಾಮಸ್ಥರಿದ್ದರು.
