ಯಲಹಂಕ ಸುದ್ದಿ: ಯಲಹಂಕ ಓಲ್ಡ್ ಟೌನ್‌ನ ಪುಷ್ಕರಣಿ ರಸ್ತೆಯಲ್ಲಿ ‘ಏಕದಂತ ಗೆಳೆಯರ ಬಳಗ’ದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 4ನೇ ವರ್ಷದ ಗಣೇಶೋತ್ಸವವು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮ-ಸಡಗರಗಳಿಂದ ನೆರವೇರಿತು.
ದಿನಾಂಕ 14.09.2026 ರಂದು ಅತ್ಯಂತ ವೈಭವದಿಂದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ದಿನದಿಂದ ಪ್ರತಿದಿನ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ಪೂಜೆ-ಪುನಸ್ಕಾರಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಹಾಗೂ ಮಹಿಳೆಯರಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಪ್ರೋತ್ಸಾಹ ನೀಡಲಾಯಿತು.

ಇಂದು (26.09.2026) ಬಣ್ಣ ಬಣ್ಣದ ಕಸರತ್ತು, ತಮಟೆ ವಾದ್ಯಗಳ ಜಾನಪದ ಕಲಾತಂಡಗಳ ಅಬ್ಬರದೊಂದಿಗೆ, ಯುವಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ರಾಜಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯ ಉದ್ದಕ್ಕೂ ಯುವಕ-ಯುವತಿಯರು ಕೇಸರಿ ಶಾಲು ಧರಿಸಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಮೆರವಣಿಗೆಯ ನಂತರ ಶಾಸ್ತ್ರೋಕ್ತವಾಗಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು
