ಬೆಂಗಳೂರು ಉತ್ತರ ಜಿಲ್ಲೆ :- ಚಿಕ್ಕಬಾಣಾವರ ಸರ್ಕಾರಿ ಪ್ರೌಢಶಾಲಾ ಮಕ್ಕಳಿಂದ ಉತ್ತರ ಕರ್ನಾಟಕದ ಬಹುದೊಡ್ಡ ಹಬ್ಬ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು ಊರಿನ ಜನ ಶಾಲೆಯ ಮುಖ್ಯ ಶಿಕ್ಷಕರು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದರು
ಯಲಹಂಕ ಸುದ್ದಿ
ಚಿಕ್ಕಬಾಣಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಗರ ಪಂಚಮಿ ಸಂಭ್ರಮ
ಬೆಂಗಳೂರು ಉತ್ತರ ಜಿಲ್ಲೆ, ಚಿಕ್ಕಬಾಣಾವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಶಾಲೆಯ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು, ನಾಗರ ಪಂಚಮಿ ಹಬ್ಬದ ವಿಶೇಷತೆಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಹಬ್ಬದ ಅಂಗವಾಗಿ ವಿವಿಧ ಸಾಂಪ್ರದಾಯಿಕ ಹಾಗೂ ವಿಶೇಷವಾಗಿ ಜನಪದ ಗೀತೆ ಮತ್ತು ಜೋಕಾಲಿ ಆಚರಣೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಗಮನ ಸೆಳೆದವು.
ಈ ಸಂದರ್ಭದಲ್ಲಿ ಊರಿನ ಜನರು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅರಿವು ಮೂಡಿಸುವಂತಾಯಿತು. ಮಕ್ಕಳ ಪೋಷಕರು ಬಹಳ ಖುಷಿ ಪಟ್ಟರು ಈ ಕಾರ್ಯಕ್ರಮ ಆಯೋಜನೆ ಮಾಡಿದಂತ ರಾಧಾ H ಕಾರಟಗಿ ಸಂಗೀತ ಶಿಕ್ಷಕಿ ಚಿಕ್ಕಬಾಣವರ ಶಾಲೆ ಬೆಂಗಳೂರು ರವರಿಗೆ ಧನ್ಯವಾದಗಳು ತಿಳಿಸಿದರು
