Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಂಪಿಗೆಹಳ್ಳಿ ವಾರ್ಡಿನ. ಅಗ್ರಹಾರ ಬಡಾವಣೆಯ. ಸರ್ಕಾರಿ ಶಾಲೆಯಲ್ಲಿ. 80ನೇ ಸ್ವಾತಂತ್ರ್ಯ ದಿನಾಚರಣೆ

Share

ಬೆಂಗಳೂರು: ಸಂಪಿಗೆಹಳ್ಳಿ ವಾರ್ಡ್‌ನ ಅಗ್ರಹಾರ ಬಡಾವಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ದೇಶಭಕ್ತಿ ವೇಷಭೂಷಣಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ, ದೇಶಭಕ್ತಿ ಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದರು.

 

ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಎನ್ ನರಸಿಮೂರ್ತಿ ಬಿಜೆಪಿ ಮುಖಂಡರು ಇವರು ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯಕ್ರಮ ಬಂದವರಿಗೆ ಸಿಹಿತಿಂಡಿಯನ್ನು ವಿತರಿಸಿದರು ಹಾಗೂ ಮುನಿಸ್ವಾಮಿ ಒಡೆಯರ್ ಬಿಜೆಪಿ ಮುಖಂಡರು ಇವರು ಉಪಹಾರ ವ್ಯವಸ್ಥೆ ಮಾಡಲಾಯಿತು ಇವರಿಬ್ಬರ ನೇತೃತ್ವದಲ್ಲಿ ಕಾರ್ಯಕ್ರಮ ಬಹಳ ವಿಜೃಂಭಣೆ ನಡೆಯಿತು ಈ ಸಂದರ್ಭದಲ್ಲಿ ಎರಡು ಶಾಲೆಯ ಶಿಕ್ಷಕರ ವೃಂದದವರು ಪೋಷಕರು ಹಾಗೂ ಸಾರ್ವಜನಿಕರು ಸೇರಿದಂತೆ ಅನೇಕರು ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.

ಮಕ್ಕಳು ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು ಈ ಕಾರ್ಯಕ್ರಮವು ದೇಶಭಕ್ತಿ, ಏಕತೆ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರುವ ಮೂಲಕ ಅರ್ಥಪೂರ್ಣವಾಗಿ ನಡೆಯಿತು.

Written by

Bayalu Simha

Leave a Reply

Your email address will not be published. Required fields are marked *