ಕೆ.ಆರ್. ಪುರ, ಸೆ.22- ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಕ್ಷೇತ್ರದ ನಲ್ಲೂರುಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಅವರು ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಅವರು ಮನೆಯಿಲ್ಲದ ಬಡವರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡುವ ಉತ್ತಮ ಕಾರ್ಯಕ್ಕೆ ಚಾಲನೆ ನೀಡಿದ್ದು,ಸಂತಸ ತಂದಿದೆ, ಕಾಮಗಾರಿಯನ್ನು ಗುಣಮಟ್ಟದಿಂದ ತ್ವರಿತಗತಿಯಲ್ಲಿ ಮಾಡುವಂತೆ ಸಲಹೆ ನೀಡಿದರು.
ಬಡವರಿಗೆ ಸೂರು ಕಲ್ಪಿಸುವುದು ನನ್ನ ಗುರಿಗಳಲ್ಲಿ ಒಂದು ಇಂದು 75 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು,ಮತ್ತೊಂದು ಹಂತದಲ್ಲಿ ಮತ್ತಷ್ಟು ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ,ಡಾಂಬರೀಕರಣ ಹಾಗೂ ಆರೋಗ್ಯ ತಪಾಸಾಣಾ ಶಿಬಿರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯರಾದ ಗೀತಾವಿವೇಕಾನಂದ,ಸಿದ್ದಲಿಂಗಯ್ಯ,ಮಂಡಲ ಪ್ರಧಾನ ಕಾರ್ಯದರ್ಶಿ ಮಾರ್ಕೆಟ್ ರಮೇಶ್,ಕಾರ್ಯದರ್ಶಿ ರಾಮಲಕ್ಷ್ಮಣ್,ಮುಖಂಡರಾದ ಡಿ.ಶ್ರೀನಿವಾಸ್, ಭಕ್ತವತ್ಸಲ,ಸದಾನಂದ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
