Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ :

Share

ಯಲಹಂಕ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ಸಾರ್ವಜನಿಕ ಸೇವೆಯ ಸ್ಮರಣೆಗಾಗಿ ಆಚರಿಸಲಾಗು ತ್ತಿರುವ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಯಲಹಂಕ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಚೌಡೇಶ್ವರಿ ವಾರ್ಡ್ 3ರ ವ್ಯಾಪ್ತಿಯ ಕಾಮಾಕ್ಷಮ್ಮ ಬಡಾವಣೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾರ್ಡ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆ ಯರಿಗೆ ಅವರ ಸೇವೆಯನ್ನು ಗುರುತಿಸಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ನಂತರ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮಾತನಾಡಿ ‘ ‘ಸಮಾಜಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾದದ್ದು, ಅಂಗನವಾಡಿ ಮಕ್ಕಳ ಪೋಷಣೆ ಜೊತೆಗೆ, ಸರ್ಕಾರದ ನೀತಿ ನಿಯಮಗಳು, ಸೌಲಭ್ಯಗಳು, ಅವುಗಳನ್ನು ಪಡೆಯುವ ಬಗೆ, ಮತದಾರರಿಗೆ ಅಗತ್ಯ ಮಾಹಿತಿ ನೀಡುವುದು ಮುಂತಾದ ಸಾರ್ವಜನಿಕ ಸೇವಾ ಕಾರ್ಯಗಳನ್ನು ಅತ್ಯಂತ ಶ್ರದ್ಧೆಯಿಂದ ಮಾಡಿಕೊಂಡು ಬರುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ಥಕ ಸಾರ್ವಜನಿಕ ಸೇವೆಯ ಸ್ಮರಣೆಯ ದ್ಯೋತಕವಾಗಿ ಆಚರಿಸಲಾಗುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ಗೌರವಿಸುತ್ತಿರುವುದು ಸಂತೋಷ ಉಂಟು ಮಾಡಿದೆ. ಸಾರ್ವಜನಿಕರಿಗೆ ಅವರು ನೀಡುತ್ತಿರುವ ಅನುಪಮ ಸೇವೆ ಹೀಗೆಯೇ ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಇದೇ ವೇಳೆ ಕಾಮಾಕ್ಷಮ್ಮ ಬಡಾವಣೆಯ ಅಂಗನವಾಡಿ ಕೇಂದ್ರ 1 ಮತ್ತು 2ರ ಅಂಗನವಾಡಿ ಕಾರ್ಯಕರ್ತೆ ಯರಾದ ಶ್ರೀದೇವಿ, ಮಾಲಾ, ಸಹಾಯಕಿ ಲಕ್ಷ್ಮಿ, ಆಶಾ ಕಾರ್ಯಕರ್ತೆಯರಾದ ಮಾನಸ, ಕಾವ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಯಲಹಂಕ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಬೃಂದಾ ವೀರೇಶ್, ಚೌಡೇಶ್ವರಿ ವಾರ್ಡ್ ಅಧ್ಯಕ್ಷೆ ರಮಾ ಮುನಿರಾಜು, ಯಲಹಂಕ ನಗರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಮುನಿರಾಜು, ಪ್ರಧಾನ ಕಾರ್ಯದರ್ಶಿಗಳಾದ ವಿ.ಎಂ. ಈಶ್ವರ್, ವಿ.ಪವನ್ ಕುಮಾರ್, ಚೌಡೇಶ್ವರಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿ.ವಿ.ರಾಮಮೂರ್ತಿ, ಬಿಜೆಪಿ ಮುಖಂಡರಾದ ವೈ.ವಿ. ಮುನಿರಾಜು, ದಾಮೋದರ್, ನಾರಾಯಣ ಪೈ, ರಾಮಿರೆಡ್ಡಿ, ಚೌಡರೆಡ್ಡಿ, ಮೋಹನ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು

Written by

Bayalu Simha

Leave a Reply

Your email address will not be published. Required fields are marked *