Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಚಿಕ್ಕ ಹೊಸಹಳ್ಳಿ ಹಾಲು ಉತ್ಪಾದಕರ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ

Share

ಬಂಗಾರಪೇಟೆ: ತಾಲೂಕಿನ ಚಿಕ್ಕ ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹3,39,778.27 ನಿವಳ ಲಾಭ ಗಳಿಸಿದೆ ಎಂದು ಸಂಘದ ಉಪಾಧ್ಯಕ್ಷ ಚಲಪತಿ ತಿಳಿಸಿದರು.

ಚಿಕ್ಕ ಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ,
ಸಂಘದ ವತಿಯಿಂದ ಹಾಲು ಉತ್ಪಾದಕರಿಗೆ ಸಮಯಕ್ಕೆ ಸರಿಯಾಗಿ ಹಾಲಿನ ಹಣ ಪಾವತಿ ಮಾಡುವುದರ ಜೊತೆಗೆ, ಸದಸ್ಯರ ಹಿತದೃಷ್ಟಿಯಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಂಘದ ಸದಸ್ಯರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಂಘಕ್ಕೆ ಪೂರೈಸುತ್ತಿರುವುದರಿಂದ ಸಂಘದ ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಹಾಲು ಉತ್ಪಾದಕರಿಗೆ ಸಹಕಾರ ಸಂಘಗಳು ಆರ್ಥಿಕವಾಗಿ ನೆರವಾಗುವ ಪ್ರಮುಖ ವೇದಿಕೆಯಾಗಿದ್ದು, ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಹಾಲಿನ ಗುಣಮಟ್ಟವನ್ನು ಕಾಪಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಹಾಲು ಪೂರೈಸುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಂಘದ 2025-26ನೇ ಸಾಲಿನ ಆದಾಯ-ವೆಚ್ಚ, ಲಾಭ-ನಷ್ಟ ಹಾಗೂ ಮುಂದಿನ ಸಾಲಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಿತು. ಸಂಘದ ಲಾಭದಾಯಕ ಸ್ಥಿತಿ ಮುಂದುವರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸದಸ್ಯರಿಂದ ಸಲಹೆಗಳನ್ನು ಪಡೆಯಲಾಯಿತು.

ಈ ಸಭೆಯಲ್ಲಿ ಸಂಘದ ನಿರ್ದೇಶಕ ಸಿ.ಎಂ ನಂಜುಂಡ ಗೌಡ, ಚಂದ್ರಪ್ಪ,ಶ್ರೀರಾಮಪ್ಪ,ವೆಂಕಟೇಶಪ್ಪ, ನಾರಾಯಣಸ್ವಾಮಿ ಸಿ. ಎಸ್,ನಾರಾಯಣಸ್ವಾಮಿ ಸಿ.ಎ,ಶಾಂತಮ್ಮ,ವೆಂಕಟಮ್ಮ, ಸಿ.ಎ.ನಾರಾಯಣಸ್ವಾಮಿ, ಮುಖ್ಯ ಕಾರ್ಯನಿರ್ವಾಹಕ ಎಂ.ರಾಜು, ಹಾಲು ಪರೀಕ್ಷಕ ಗೋವಿಂದಣ್ಣ ಹಾಗೂ ಹಾಲು ಉತ್ಪಾದಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Written by

Bayalu Simha

Leave a Reply

Your email address will not be published. Required fields are marked *