ಯಲಹಂಕ: ಜಾಲ ಹೋಬಳಿಯ ಕಾಂಗ್ರೆಸ್ ಮುಖಂಡ ದಾನೆಗೌಡರು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರ (ಬೈಯಪ್ಪ)ದ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳು ಹಾಗೂ ನಿರಂತರ ಲೇಔಟ್ ನಿವಾಸಿಗಳು ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದಾನೆಗೌಡರಿಗೆ ಹಾರ ಹಾಕಿ, ಹೂಗುಚ್ಛ ನೀಡಿ ಶುಭಾಶಯಗಳನ್ನು ಸಲ್ಲಿಸಲಾಯಿತು. ಅವರ ನೇಮಕಾತಿಯಿಂದ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅಭಿಮಾನಿಗಳು ಹಾಗೂ ನಿವಾಸಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಆರ್. ವೆಂಕಟನಾರಾಯಣ ರೆಡ್ಡಿ, ಮುನೇಗೌಡ, ಶಿವಕುಮಾರ್, ಚೇತನ್ ರೆಡ್ಡಿ, ಹರಿಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.
