Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಡಾ.ಶ್ರೀನಿವಾಸಪ್ಪ ಆಧಾರರಹಿತ ಆರೋಪ ನಿಲ್ಲಿಸಿ: ಇಲ್ಲವಾದರೆ ಪ್ರತಿಭಟನೆ

Share

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಸಂಸ್ಥಾಪಕ ಹಾಗೂ ಏಡುಕೊಂಡಲು ಬಿಲ್ಡರ್ಸ್‌ ಅಂಡ್‌ ಡೆವಲಪರ್ಸ್‌ ಮಾಲೀಕ ಟಿ. ಶ್ರೀನಿವಾಸಪ್ಪ ಅವರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಳೆದ ಒಂದು ವಾರದಿಂದ ಹಣಕಾಸು ಅವ್ಯವಹಾರ ಹಾಗೂ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಅದು ತಕ್ಷಣ ನಿಲ್ಲಿಸಬೇಕು ಎಂದು ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸಪ್ಪ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಯಾವುದೇ ದಾಖಲೆ ಅಥವಾ ಸಾಕ್ಷ್ಯಗಳಿದ್ದರೆ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಲಿ ಅಥವಾ ನ್ಯಾಯಾಲಯದ ಮೊರೆ ಹೋಗಲಿ.ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ.ಆದರೆ ಕೇವಲ ಆರೋಪಗಳನ್ನು ಮಾಡಿ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಹೇಳಿದರು.
ಶ್ರೀನಿವಾಸಪ್ಪ ಅವರು ಹಲವು ವರ್ಷಗಳಿಂದ ಜಾತಿ, ಧರ್ಮದ ಭೇದವಿಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬಲಗೈ ಸಮುದಾಯದ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಂತು ಜಿಲ್ಲೆಯಾದ್ಯಂತ ಹಲವು ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅವರ ಸಮಾಜಮುಖಿ ಸೇವೆಯನ್ನು ಸಹಿಸದ ಕೆಲ ಕಾಣದ ಕೈಗಳು ದುರುದ್ದೇಶದಿಂದ ಅವರನ್ನು ತೇಜೋವಧೆ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು. ಅವರು ಇದು ಮುಂದುವರಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಮಕೃಷ್ಣ ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಪಿಳ್ಳಾಂಜಿನಪ್ಪ, ವೇಣುಗೋಪಾಲ್, ಬಾಗೇಪಲ್ಲಿ ಕೃಷ್ಣಪ್ಪ, ನಾರಾಯಣಸ್ವಾಮಿ, ಗೌರಿಬಿದನೂರು ನಾಗರಾಜ್, ಸಿ.ಗಂಗಾಧರಪ್ಪ, ಬಿ.ಎನ್. ಗಂಗಾಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.( ಮುಬಷೀರ್ ಅಹಮದ್ )

Written by

Bayalu Simha

Leave a Reply

Your email address will not be published. Required fields are marked *