Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಗುರ್ಲಾಪುರದಲ್ಲಿ ರೈತರ ಬೃಹತ್ ಪೂರ್ವಭಾವಿ ಸಭೆ:

Share

ಮೂಡಲಗಿ– ತಾಲೂಕಿನ ಗುರ್ಲಾಪುರದಲ್ಲಿ ಶುಕ್ರವಾರ ರೈತರ ಬೃಹತ್ ಪೂರ್ವಭಾವಿ ಸಭೆ ಜರುಗಿತು.
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಒಂದೇ ಕಬ್ಬಿನ ದರ ನಿಗದಿಗೆ ಒತ್ತಾಯಿಸಿ ಈ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಭಾಗವಹಿಸಿದ್ದರು.

ಸಭೆಯಲ್ಲಿ ಮಹಾರಾಷ್ಟ್ರದ ಸ್ವಾಭಿಮಾನಿ ಶತಕರಿ ಸಂಘಟನೆಯ ಮುಖಂಡ ಮಾಜಿ ಸಂಸದ ರಾಜು ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಸೇರಿದಂತೆ ಹಲವು ರೈತ ಮುಖಂಡರು ಮಾತನಾಡಿದರು.
ಸೆಪ್ಟೆಂಬರ್ 29 ರಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ನಿವಾಸದ ಮುಂದೆ ಲಕ್ಷಾಂತರ ರೈತರು ಸೇರಿ ಬೃಹತ್ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಶಶಿಕಾಂತ ಗುರುಜಿ ಅವರು, ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರು ಜಂಟಿಯಾಗಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಎರಡೂ ರಾಜ್ಯಗಳ ಗಡಿ ಭಾಗದ ಸಕ್ಕರೆ ಕಾರ್ಖಾನೆಗಳು ಬೇರೆ ಬೇರೆ ಬೆಲೆ ನೀಡಿ ರೈತರನ್ನು ಶೋಷಣೆ ಮಾಡುತ್ತಿವೆ. ಆದ್ದರಿಂದ ಕಬ್ಬಿಗೆ ಒಂದೇ ಬೆಲೆ ನಿಗದಿಯಾಗಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಇನ್ನು ಅನೇಕ ರೈತ ಸಂಘಟನೆಗಳ ಪದಾಧಿಕಾರಿಗಳು, ಪ್ರಗತಿಪರ ರೈತರು ಭಾಗಿಯಾಗಿದ್ದರು

Written by

Bayalu Simha

Leave a Reply

Your email address will not be published. Required fields are marked *