Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಕಟ್ಟಿಗೆನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ.

Share

ಯಲಹಂಕ ಸುದ್ದಿ: ಕಟ್ಟಿಗೆನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ರಮೇಶ್ ಹರೀಶ್ ರವರು. ಸಿರಿದಂತೆ. ಗ್ರಾಮದ ಅನೇಕ ಮುಖಂಡರು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದರು. ಧ್ವಜಾರೋಹಣ ನೆರವೇರಿಸಿ, ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನವನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ದೇಶಭಕ್ತಿ ಗೀತೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ವಿದ್ಯಾರ್ಥಿಗಳು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಉತ್ತಮ ಶಿಕ್ಷಣದೊಂದಿಗೆ ದೇಶಪ್ರೇಮ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಬಹಳ ಚೆನ್ನಾಗಿ ಮೂಡಿ ಬಂತು ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮವನ್ನು ನೋಡಿ ಬಹಳ ಖುಷಿ ಪಟ್ಟರು ಶಾಲೆಯ ಆಡಳಿತ ಮಂಡಳಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

Written by

Bayalu Simha

Leave a Reply

Your email address will not be published. Required fields are marked *