ಸಂಘಟನೆ ಬಲಪಡಿಸುವುದು, ದಲಿತ ಸಮುದಾಯದ ಸಮಸ್ಯೆಗಳ ಕುರಿತು ಮಹತ್ವದ ಚರ್ಚೆ
ಬೆಳಗಾವಿ, ಸೆ. 20: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ.) ರಾಜ್ಯ ಸಮಿತಿ ಸಭೆಯು ಭಾನುವಾರ ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ರಾಜ್ಯ ಸಂಚಾಲಕ ಶಾಮರಾವ ಘಾಟಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆ ಆರಂಭಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಆಗಮಿಸಿದ್ದ ಪದಾಧಿಕಾರಿಗಳು ಭಾಗವಹಿಸಿ, ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು, ಗ್ರಾಮ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆ ಹಾಗೂ ಸಂವಿಧಾನದ ಆಶಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು, ದಲಿತರು ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಸಂಘಟನಾತ್ಮಕವಾಗಿ ಹೋರಾಟ ರೂಪಿಸುವುದು ಮತ್ತು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಜಾಗೃತಿ ಮೂಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮುಂದಿನ ದಿನಗಳಲ್ಲಿ ರಾಜ್ಯ, ವಿಭಾಗ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಚುರುಕುಗೊಳಿಸುವುದು, ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು, ಪರಿಹಾರಕ್ಕಾಗಿ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ರಾಜ್ಯ ಸಂಚಾಲಕ ಶಾಮರಾವ ಘಾಟಗೆ, ರಾಜ್ಯ ಸಂಘಟನಾ ಸಂಚಾಲಕ ಕೆಂಪಣ್ಣ ಸಾಗ್ಯ, ಚಂದ್ರು ಚಕ್ರವರ್ತಿ, ಪ್ರಕಾಶ ಕೆಲ್ಲೂರ, ರಾಜ್ಯ ಮಹಿಳಾ ಸಂಚಾಲಕಿ ಶೋಭಾ ಕಟ್ಟಿಮನಿ, ರಾಜ್ಯ ಸಂಘಟನಾ ಸಂಚಾಲಕಿ ಜಯಶ್ರೀ ಕಾಂಬಳೆ, ಬೆಳಗಾವಿ ವಿಭಾಗೀಯ ಸಂಚಾಲಕ ರಮೇಶ ಸಣ್ಣಕ್ಕಿ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರ ಜಿಲ್ಲಾ ಸಂಚಾಲಕ ಕುಮಾರ, ಶಿವಮೊಗ್ಗ ಜಿಲ್ಲಾ ಸಂಚಾಲಕ ನಾಗರಾಜ ಟಿ., ಕೊಡಗು ಜಿಲ್ಲಾ ಸಂಚಾಲಕ ವೀರೇಂದ್ರ ಪಾಟೀಲ, ಹಾಸನ ಜಿಲ್ಲಾ ಸಂಚಾಲಕ ಜಗದೀಶ ಎಚ್., ಬೆಂಗಳೂರು ವಿಭಾಗ ಸಂಚಾಲಕ ಭವನೇಶ್ವರ, ಚಿಕ್ಕಮಂಗಳೂರು ಜಿಲ್ಲಾ ಸಂಚಾಲಕ ಆನಂದ, ಬಳ್ಳಾರಿ ಜಿಲ್ಲಾ ಸಂಚಾಲಕ ಕುಬೇರಪ್ಪ, ವಿಜಯಪುರ ಜಿಲ್ಲಾ ಸಂಚಾಲಕ ಚಂದ್ರಕಾಂತ ಶಿಂಗೆ ಹಾಗೂ ಸಂಘಟನಾ ಸಂಚಾಲಕ ಚಿನ್ನು ಕಟ್ಟಿಮನಿ ಅವರು ಭಾಗವಹಿಸಿದ್ದರು.
ಬೆಳಗಾವಿ ಜಿಲ್ಲಾ ಸಂಚಾಲಕ ಅಜಿತ ಹರಿಜನ, ಬೆಳಗಾವಿ ಸಂಘಟನಾ ಸಂಚಾಲಕ ಶಾಬಪ್ಪ ಸಣ್ಣಕ್ಕಿ, ನಟರಾಜ ಮಾವರಕರ, ಶಿವಾನಂದ ಹೊಸಮನಿ, ಲಕ್ಷ್ಮಣ ಮೇತ್ರಿ, ರಮೇಶ ಈರಗಾರ, ವೀರಭದ್ರ ಮೇಲನ್ನವರ, ಹನುಮಂತ ಚಿಮ್ಮಲಗಿ, ಬೆಳಗಾವಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಅಶೋಕ ಸಿದ್ಲಿಂಗಪ್ಪಗೋಳ ಹಾಗೂ ಬೈಲಹೊಂಗಲ ವಿಭಾಗೀಯ ಸಂಚಾಲಕ ತೌಪಿಕ ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದಲ್ಲದೆ ಬೆಳಗಾವಿ ಮಹಿಳಾ ಸಂಚಾಲಕಿ ಫರೀದಾ ಮಹಮ್ಮದ್, ಸಲೀಂಮುಲ್ಲಾ, ಮೂಡಲಗಿ ತಾಲೂಕು ಸಂಚಾಲಕ ಲಕ್ಷ್ಮಣ ತೇಳಗಡೆ, ಗೋಕಾಕ ತಾಲೂಕು ಸಂಘಟನಾ ಸಂಚಾಲಕ ಭೀಮಶಿ ಹರಿಜನ, ಗೋಕಾಕ ತಾಲೂಕು ಸಂಚಾಲಕಿ ರುಕ್ಮವ್ವ ರಾ. ಕುದರಿ, ರೇಣುಕಾ ಹರಿಜನ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಪದಾಧಿಕಾರಿಗಳು ಸಂಘಟನೆಯ ಮುಂದಿನ ಹೋರಾಟಗಳು, ಜನಪರ ಕಾರ್ಯಚಟುವಟಿಕೆಗಳು ಹಾಗೂ ಸಂಘಟನೆಯ ಬಲವರ್ಧನೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಬೆಳಗಾವಿ ಸರ್ಕಿಟ್ ಹೌಸ್‌ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸಭೆ
