ಕೆ.ಆರ್ .ಪುರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಶಾಸಕ ಎಸ್.ಟಿ. ಸೋಮಶೇಖರ್ ಅವರ ಹೇಳಿಕೆಗೆ ಕೆಆರ್ ಪುರ ಶಾಸಕ ಬೈರತಿ ಬಸವರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಕಲ್ಕೆರೆ ಗ್ರಾಮದಲ್ಲಿ ರಸ್ತೆ ಡಾಂಬರು ಪೂಜೆಯಲ್ಲಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಕ್ರಿಯೆ ನೀಡಿದ ಶಾಸಕ ಬೈರತಿ ಬಸವರಾಜ ಅವರು,
“ಅವರೇನು ನಮ್ಮ ಪಕ್ಷದ ಅಧ್ಯಕ್ಷರಾ, ಅವರು ಹೇಳಿದಂತೆ ನಡೆಯುವುದಕ್ಕೆ? ನಮಗೆ ನಮ್ಮ ಪಕ್ಷದ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎಂಬುದನ್ನು ಪಕ್ಷದ ಹೈಕಮಾಂಡ್ ಮತ್ತು ವರಿಷ್ಠರು ತೀರ್ಮಾನ ಮಾಡುತ್ತಾರೆ. ಪಕ್ಷದಲ್ಲಿ ಟಿಕೆಟ್ ನೀಡುವ ವಿಚಾರ ನಿರ್ಧಾರ ಮಾಡಲು ಸೋಮಶೇಖರ್ ಯಾರು?” ಎಂದು ನೇರವಾಗಿ ಪ್ರಶ್ನಿಸಿ ಕಿಡಿಕಾರಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ತನ್ನದೇ ಆದ ಸಿದ್ಧಾಂತ ಮತ್ತು ಕಟ್ಟುನಿಟ್ಟಿನ ನಿಯಮಗಳನ್ನು ಹೊಂದಿದೆ. ನನಗೂ ಕೂಡ ಪಕ್ಷದ ಮೇಲೆ ಸಂಪೂರ್ಣ ನಂಬಿಕೆಯಿದೆ. ನಾನು ರಾಜ್ಯದಲ್ಲೇ ಉತ್ತಮ ಹೆಸರು ಪಡೆದಿರುವ ಶಾಸಕನಾಗಿದ್ದೇನೆ. ನನ್ನ ವಿರುದ್ಧ ಕೆಲವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಯಾರೋ ಏನೋ ಹೇಳಿದರು ಎಂದು ನಾನು ತಲೆ ಕೆಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬೈರತಿ ಬಸವರಾಜ್ ಟಾಂಗ್ ನೀಡಿದ್ದಾರೆ.
ಬಿಜೆಪಿ ಪಕ್ಷದ ತತ್ವಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ , ಪಕ್ಷದ ವಿರುದ್ದ ಹೇಳಿಕೆ ನೀಡುವವರ ಮೇಲೆ ಬಿಜೆಪಿ ಪಕ್ಷ ಕ್ರಮ ಕೈಗೊಳ್ಳುತ್ತದೆ.ಇದರ ಬಗ್ಗೆ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ನಾವು ತಲೆ ಕಡೆಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಇಂದು ಕಲ್ಕೆರೆ ಗ್ರಾಮದಲ್ಲಿ ರಸ್ತೆ ಡಾಂಬರು ಕೆಲಸಕ್ಕೆ ಪೂಜೆ ನೆರವೇರಿಸಿದ್ದು ಗುಣಮಟ್ಟ ದೊಂದಿಗೆ ಕಾಮಗಾರಿ ಮಾಡಿ ಎಂದು ಗುತ್ತಿಗೆದಾರ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕಲ್ಕೆರೆ ಮಾದೇಶಣ್ಣ, ಕೃಷ್ಣಮೂರ್ತಿ, ಕಲ್ಕೆರೆ ವಿಜಿ, ಮುನೇಗೌಡ ಮತ್ತಿತರರು ಹಾಜರಿದ್ದರು
