ಕೆ.ಆರ್.ಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೇಡ್ ವಿತರಣೆ ಮಾಡುವುದರ ಮೂಲಕ ಶಾಸಕ ಬೈರತಿ ಬಸವರಾಜ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಜನಪರ ಯೋಜನೆ ಜಾರಿಗೆ ತರುವ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದಾರೆ, ವಿಶ್ವದಲ್ಲೇ ನಮ್ಮ ದೇಶದ ಗೌರವವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಒಂದು ದಿನ ವಿಶ್ರಮಿಸದೆ ಸದಾ ಕಾಲ ದೇಶದ ಅಭಿವೃದ್ಧಿಗೆ ದುಡಿಯುತ್ತಿರುವ ಮೋದಿ ಅವರ ಜನ್ಮದಿನವನ್ನು ಅನೇಕ ಸೇವಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಎಂದು ಆರ್ಥಪೂರ್ಣವಾಗಿ ಆಚರಿಸಲಾಯಿತು ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ವಿಶ್ವದ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದು ಅವರ ನೇತೃತ್ವದಲ್ಲಿ ಭಾರತ ದೇಶ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.
ಇಂದು ಸಂಜೆ 6 ರಿಂದ ರಾತ್ರಿ 7 ರೊಳಗೆ ಎಲ್ಲರೂ ಮನೆಯಲ್ಲಿ ದೀಪ ಬೆಳಗುವ ಮೂಲಕ ಕೈಜೋಡಿಸಬೇಕು ಮನವಿ ಮಾಡಿದರು.
ನರೇಂದ್ರ ಮೋದಿ ಅವರ ಹೆಸರಿನಲ್ಲಿ
ಕಟ್ಟೆವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಶಾಸಕರು ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿ ಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಆವರಣದಲ್ಲಿ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮ ನೆರವೇರಿಸ ಲಾಯಿತು. ಜನ್ಮದಿನದ ಅಂಗವಾಗಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಮುನೇಗೌಡ ಮಾಜಿ ಪಾಲಿಕೆ ಸದಸ್ಯರಾದ ಗೀತಾವಿವೇಕಾನಂದ, ಅಂತೋಣಿ ಸ್ವಾಮಿ,ಶ್ರೀಕಾಂತ್ ಮುಖಂಡರಾದ ಕೆ.ಹೇಂಮತ್,ಜಿಮ್ ರಮೇಶ್ ಗೌಡ,,ಶಿವಪ್ಪ,ಶ್ರೀನಿವಾಸ್,ಗಿರೀಶ್, ಮತ್ತಿತರರು ಇದ್ದರು.
