Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಗ್ರಾಹಕರ ಹಿತರಕ್ಷಣೆ, ಸಹಕಾರ ತತ್ವದ ಪಾಲನೆಗೆ ಆಧ್ಯತೆ : ಎಂ.ಬಿ.ಕೃಷ್ಣಮೂರ್ತಿ

Share

ಯಲಹಂಕ : ಸಹಕಾರ ತತ್ವದ ಪಾಲನೆ ಮತ್ತು ಗ್ರಾಹಕರ ಹಿತರಕ್ಷಣೆ ನಮ್ಮ ಸಹಕಾರ ಸಂಘದ ಮುಖ್ಯ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಸಂಘವು ಕಳೆದ 50 ವರ್ಷಗಳಿಂದ ನಿರಂತರವಾಗಿ ಗ್ರಾಹಕ‌ ಬಂಧುಗಳಿಗೆ ಸೇವೆ ಸಲ್ಲಿಸುತ್ತಾ ಬಂದಿದೆ ಎಂದು ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ.ಕೃಷ್ಣಮೂರ್ತಿ ಅಭಿಪ್ರಾಯ ಪಟ್ಟರು.

ಯಲಹಂಕ ಕ್ಷೇತ್ರದ ಹೆಸರಘಟ್ಟದಲ್ಲಿ ಸೋಮವಾರ ಆಯೋಜಿಸಿದ್ದ ಸಹಕಾರ ಸಂಘದ 50ನೇ ವರ್ಷದ ಸ್ವರ್ಣ ಮಹೋತ್ಸವ ಸಮಾರಂಭ ಮತ್ತು 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಶಾಸಕ ಎಸ್ ಆರ್ ವಿಶ್ವನಾಥ್ ಮತ್ತು ಆರ್.ಎಸ್.ಎಸ್.ಎನ್. ಬ್ಯಾಂಕ್ ನ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಕಳೆದ 50 ವರ್ಷಗಳಲ್ಲಿ ತನ್ನ ಷೇರುದಾರರು ಮತ್ತು ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಪ್ರಶಂಸೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಗಳಿಸಿರುವ ಸಹಕಾರ ಸಂಘವು ಆರ್ಥಿಕವಾಗಿ ಹಿಂದುಳಿದ ಕೃಷಿಕರು, ಕಾರ್ಮಿಕರು ಮತ್ತು ಮಹಿಳೆಯರ ಉನ್ನತಿಗಾಗಿ ಶ್ರಮಿಸುತ್ತಿದೆ. ಠೇವಣಿ ಸಂಗ್ರಹ ಮತ್ತು ಸಾಲ ವಸೂಲಾತಿಯಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಸಂಘದ ಸದಸ್ಯರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು ಪೂರಕ ಸೌಲಭ್ಯಗಳನ್ನು ಒದಗಿಸಲು ಹಲವು ಯೋಜನೆಗಳನ್ನು ರೂಪಿಸುವತ್ತ ಧಾಪುಗಾಲು ಇಟ್ಟಿದೆ ಎಂದರು.

ಸ್ಚರ್ಣ ಮಹೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ, ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ, ಪ್ರಸಕ್ತ ಸಾಲಿನಲ್ಲಿ ಮರಣ ಹೊಂದಿದ ಸದಸ್ಯರ ಕುಟುಂಬಗಳಿಗೆ ಸಹಾಯಧನ ವಿತರಣೆ, ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಉಪಾಧ್ಯಕ್ಷೆ ಹೆಚ್.ಸಿ.ರತ್ನ, ನಿರ್ದೇಶಕರಾದ ಹೆಚ್.ಡಿ.ಕೃಷ್ಣಪ್ಪ, ಅಶ್ವಥ್ ಬಿ., ಹೆಚ್.ಎನ್.ಕೇಶವ, ನಂಜುಂಡಪ್ಪ ಸಿ., ರಾಘವೇಂದ್ರ ಕೆ.ಜೆ., ಲಕ್ಷ್ಮಣ ಬಿ.ಎಂ., ಬಿ.ಹೆಚ್.ಸುರೇಶ್, ಹೆಚ್.ಎ.ಅನಸೂಯ, ಚಂದ್ರಪ್ಪ, ಜಯಮ್ಮ, ಸಿಇಓ ಬಿ.ಎನ್.ಪುರುಷೋತ್ತಮ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಡಿ.ವಿ.ಶಿವಕುಮಾರ್ ಸೇರಿದಂತೆ ಕಚೇರಿಯ ಸಿಬ್ಬಂದಿಗಳಿದ್ದರು.

Written by

Bayalu Simha

Leave a Reply

Your email address will not be published. Required fields are marked *