ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ನೋಡಿಕೊಳ್ಳುವುದು ನೂತನ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಪ್ರಮುಖ ಉದ್ದೇಶವಾಗಿದೆ ಎಂದು ನೂತನ ತಾಲೂಕು ಅಧ್ಯಕ್ಷ ನಾಯನಹಳ್ಳಿ ನಾರಾಯಣಸ್ವಾಮಿ ಹೇಳಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಸಮಿತಿ ರಚನೆಯಾಗಿದ್ದು,ಕಾಂಗ್ರೆಸ್ ಹಿರಿಯ ಮುಖಂಡ ನಾಯನಹಳ್ಳಿ ನಾರಾಯಣಸ್ವಾಮಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಡಿ ಜೊತೆಗೆ 14 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಗುರುವಾರ ನಗರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ನೂತನ ಅಧ್ಯಕ್ಷರು ಹಾಗೂ ಸದಸ್ಯರು ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ, ಮಂಡಿಕಲ್-ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್,ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರ ವಿಶ್ವನಾಥ್,ಮಾಸ್ತಾನ್ ಸಾಬ್, ಮಹಿಳಾ ಕಾಂಗ್ರೆಸ್ ನ ಮಂಗಳಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು,ನೂತನ ಅಧ್ಯಕ್ಷರು ಹಾಗೂ ಸದಸ್ಯರಿಗೆ ಶುಭ ಹಾರೈಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ನಾಯನಹಳ್ಳಿ ನಾರಾಯಣಸ್ವಾಮಿ ಮಾತನಾದಿ,ಮೊದಲ ಸಭೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ,ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಸರ್ಕಾರದ ಯೋಜನೆಗಳಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳು ರಾಜ್ಯದ ಜನರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿವೆ.ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ನೆರವಾಗಿದೆ ಎಂದು ಹೇಳಿದರು.
ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ಉತ್ತಮ ಆಡಳಿತ ಹಾಗೂ ಮೂಲಸೌಕರ್ಯ ಕಲ್ಪಿಸುವುದಕ್ಕೆ ಶಾಸಕರು ಆದ್ಯತೆ ನೀಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.ಇದಲ್ಲದೆ,ಸ್ವಂತವಾಗಿ ಆರೋಗ್ಯ ಸಂಬಂಧಿತ ಉಚಿತ ಆಂಬ್ಯುಲೆನ್ಸ್ ಸೇವೆ, ವಿದ್ಯಾರ್ಥಿಗಳಿಗೆ ವೇತನ ಹಾಗೂ ಮಹಿಳೆಯರಿಗೆ ಸೀರೆ ಸೇರಿದಂತೆ ವಿವಿಧ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ದಿಬ್ಬುರು ವಿ. ಶ್ರೀನಿವಾಸ್ ಮಾತನಾಡಿ,ಪ್ರಾಧಿಕಾರದ ಸದಸ್ಯರಾಗಿರುವುದು ಕೇವಲ ಅಧಿಕಾರಕ್ಕಾಗಿ ಅಲ್ಲ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಿಂದ ನಗರ ಪ್ರದೇಶದವರೆಗೆ ಸಭೆಗಳನ್ನು ನಡೆಸಿ, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ನೂತನ ಸದಸ್ಯರಾದ ನಾಗೇಶ್ ರೆಡ್ಡಿ, ಬಾಬಾ ಜಾನ್,ಶ್ರೀರಾಮರೆಡ್ಡಿ,ತಂಜೀಮ್,ನಾಗೇಶ್, ಅನುಸೂಯಮ್ಮ,ನಸೀಮಾ ಬಾನು,ನಾರಾಯಣಮ್ಮ, ಮಂಜುಳಾ,ಗೋವರ್ಧನ್,ಪ್ರಸಾದ್ ,ಬಾಬು,ಅಶ್ವತ್ಥಪ್ಪ, ಅಭಿಲಾಷ್ ಮತ್ತು ಇತರರು ಉಪಸ್ಥಿತರಿದ್ದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ
