Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಿಂಧಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗೌರಿ ಗಣೇಶ ಹಬ್ಬ

Share

ಯಲಹಂಕ : –ನಗರದ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಮಣ್ಣಿನಿಂದ ಗಣಪತಿ ತಯಾರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ನಡೆಸಲಾಯಿತು.
ಗೌರಿ ಗಣೇಶ ಹಬ್ಬ ನಮ್ಮೆಲ್ಲರಿಗೂ ಬಹಳ ವಿಶೇಷವಾದ ಹಬ್ಬವಾಗಿದೆ. ವಿಘ್ನನಿವಾರಕ ಗಣಪ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಹಾಗಾಗಿ ಹಬ್ಬಕ್ಕಿಂತ ಕೆಲವು ದಿನಗಳ ಮುಂಚೆಯೇ ಗಣಪತಿ ತಯಾರಿಸುವ ಸಂಭ್ರಮ ಗರಿಗೆದರುತ್ತವೆ. ಅದರಂತೆ ನಮ್ಮ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಡಾ.ನಂದ ಎನ್ ಅವರ ಮಾರ್ಗದರ್ಶನದಲ್ಲಿ ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ತಯಾರಿಸುವ ಬಗ್ಗೆ ಕಾರ್ಯಾಗಾರ ಹಮ್ಮಿಕೊಂಡಿದ್ದು ವಿಶೇಷವಾಗಿತ್ತು. ಪ್ರಸಿದ್ಧ ರಂಗ ಕಲಾವಿದರಾದ ಶ್ರೀಯುತ ವಿಶ್ವನಾಥ ಬ ಮಂಡಿಯವರು ವಿದ್ಯಾರ್ಥಿಗಳಿಗೆ ಗಣಪತಿ ತಯಾರಿಸುವ ಬಗ್ಗೆ ತರಬೇತಿ ನೀಡಲು ಆಗಮಿಸಿದ್ದರು. ಕಾಲೇಜಿನ ಹಲವು ವಿದ್ಯಾರ್ಥಿಗಳು ಗಣಪತಿ ತಯಾರಿಸುವ ಕಾರ್ಯಾಗಾರದಲ್ಲಿ ಬಹಳ ಸಂಭ್ರಮದಿಂದ ಭಾಗವಹಿಸಿದ್ದರು.

ಕಲಾವಿದರ ಮಾರ್ಗದರ್ಶನದಲ್ಲಿ ಬಹಳ ತಲ್ಲೀನರಾಗಿ ಪಾಲ್ಗೊಂಡು ತಾವೇ ತಯಾರಿಸಿದ ಗಣಪತಿಯನ್ನು
ನೋಡಿ ಪುಳಕಿತರಾದರು. ವಿದ್ಯಾರ್ಥಿಗಳ ಜೊತೆಗೆ ಹಲವು ಉಪನ್ಯಾಸಕರು ತರಬೇತಿಯಲ್ಲಿ ಕೈಜೋಡಿಸಿ ಹೊಸ ಅನುಭವಕ್ಕೆ ಸಾಕ್ಷಿಯಾದರು.
ಕಾರ್ಯಕ್ರಮದ ಕೊನೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು ಮಾತನಾಡಿ ಗೌರಿ ಗಣೇಶ ಹಬ್ಬ ನಮ್ಮ ಪ್ರೀತಿಯ ಹಬ್ಬ. ಪರಿಸರಕ್ಕೆ ಹಾನಿ ಮಾಡುವ ಗಣೇಶನಿಗಿಂತ ಈ ರೀತಿ ಮಣ್ಣಿನಿಂದ ಗಣಪತಿ ತಯಾರಿಸುವುದು ತುಂಬಾ ಒಳ್ಳೆಯದು. ಈ ನಿಟ್ಟಿನಲ್ಲಿ ಆಲೋಚಿಸಿ ಈ ಕಾರ್ಯಾಗಾರವನ್ನು ಯೋಜಿಸಿದೆವು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ತರಬೇತಿಯಲ್ಲಿ ಭಾಗವಹಿಸಿರುವುದು ಬಹಳ ಸಂತಸ ನೀಡಿದೆ. ಈ ಬಗೆಯ ತರಬೇತಿಯಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮಾನಸಿಕ ನೈಪುಣ್ಯತೆ ಜಾಸ್ತಿಯಾಗುತ್ತದೆ. ಜೊತೆಗೆ ತಾವೇ ತಯಾರಿಸಿದ ಗಣಪನಿಗೆ ಪೂಜೆ ಸಲ್ಲಿಸುವುದರಿಂದ ಮಾನಸಿಕ ನೆಮ್ಮದಿಯು ಉಂಟಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಅವರು ಈ ಕಾರ್ಯಕ್ರಮಕ್ಕೆ ಸಲಹೆ ಸೂಚನೆಗಳನ್ನು ನೀಡಿ ಶುಭ ಹಾರೈಸಿದ ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.
ಹಾಗೆಯೇ ಸಿಂಧಿ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Written by

Bayalu Simha

Leave a Reply

Your email address will not be published. Required fields are marked *