Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಓರಿಯಂಟಲ್ ಕಿಸಾನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಅಮರ್ ಮಾತನಾಡಿ, ಸಾವಯವ ಕೃಷಿಯತ್ತ

Share

ಚಿಕ್ಕಬಳ್ಳಾಪುರ: ಸಹಕಾರಿ ಕ್ಷೇತ್ರವು ರೈತರಿಗೆ ಹಲವು ರೀತಿಯಲ್ಲಿ ಅನುಕೂಲ ಕಲ್ಪಿಸುತ್ತಿದ್ದು, ಕೃಷಿ ಕ್ಷೇತ್ರದಲ್ಲಿ ಸಾವಯವ ಪದ್ಧತಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಚಿಕ್ಕಬಳ್ಳಾಪುರ ಸಹಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ವಿ.ನಾಗರಾಜ್ ಹೇಳಿದರು.
ನಗರದ ರಾಘವೇಂದ್ರ ಸ್ವಾಮಿ ಮಠದ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ಓರಿಯಂಟಲ್ ಕಿಸಾನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಷ್ಟೇ ಅಲ್ಲ,ಗುಣಮಟ್ಟದ ಆಹಾರ ಉತ್ಪಾದನೆಯ ಮೂಲಕ ಜನರ ಆರೋಗ್ಯವನ್ನು ಕಾಪಾಡುವ ಪ್ರಮುಖ ಕ್ಷೇತ್ರವಾಗಿದೆ. ಹಿಂದಿನ ದಿನಗಳಲ್ಲಿ ರಸಗೊಬ್ಬರ ಬಳಸಿ ಬೆಳೆಗಳನ್ನು ಬೆಳೆಯಲಾಗುತ್ತಿತ್ತು.ಆದರೆ ಪ್ರಸ್ತುತ ಪರಿಸ್ಥಿತಿ ಬದಲಾಗಿದೆ ಈ ಹಿನ್ನೆಲೆಯಲ್ಲಿ ಸಾವಯವ ಕೃಷಿಯತ್ತ ಅರಿವು ಮೂಡಿಸುವ ಕೆಲಸ ಓರಿಯಂಟಲ್ ಕಿಸಾನ್ ಸೌಹಾರ್ದ ಸಹಕಾರಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.ಸಂಸ್ಥೆಯ ಅಧ್ಯಕ್ಷ ಅಮರ್ ಅವರ ಕಾಳಜಿ ಹಾಗೂ ಸಾವಯವ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಯುವಕರಿಗೆ ಪ್ರೇರಣೆಯಾಗಿವೆ.ಸಾವಯವ ಕೃಷಿ ಪದ್ಧತಿಯನ್ನು ಮತ್ತಷ್ಟು ಉತ್ತೇಜಿಸಿ,ರೈತರಿಗೆ ಅಗತ್ಯ ಮಾಹಿತಿ ಹಾಗೂ ಸಹಕಾರ ನೀಡಬೇಕು ಎಂದು ಹೇಳಿದರು.
ಓರಿಯಂಟಲ್ ಕಿಸಾನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಅಮರ್ ಮಾತನಾಡಿ, ಸಾವಯವ ಕೃಷಿಯತ್ತ ಸಹಕಾರಿ ಹೆಜ್ಜೆ’ ಎಂಬ ಉದ್ದೇಶದೊಂದಿಗೆ ವಿಷಮುಕ್ತ ಆಹಾರ ಉತ್ಪಾದನೆಗೆ ಉತ್ತೇಜನ ನೀಡುವುದು ಸೊಸೈಟಿಯ ಪ್ರಮುಖ ಗುರಿಯಾಗಿದೆ ಸಮಾನ ಚಿಂತನೆ ಹಾಗೂ ಸಮಾನ ಮನಸ್ಕತೆಯುಳ್ಳವರು ಸೇರಿ ಈ ಸಂಸ್ಥೆಯನ್ನು ಕಟ್ಟಿದ್ದು,ಆರಂಭದಲ್ಲಿಯೇ ಕೃಷಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಲಾಗುತ್ತಿದೆ.ನಮ್ಮ ಪೂರ್ವಜರು ಅನುಸರಿಸುತ್ತಿದ್ದ ನೈಸರ್ಗಿಕ,ಪರಿಸರ ಸ್ನೇಹಿ ಹಾಗೂ ಸಮೃದ್ಧ ಕೃಷಿ ಪದ್ಧತಿಯನ್ನು ಮತ್ತೆ ಜೀವಂತಗೊಳಿಸುವ ದಿಕ್ಕಿನಲ್ಲಿ ಸಂಸ್ಥೆ ಹೆಜ್ಜೆ ಇಟ್ಟಿದೆ.ಇದೇ ನಮ್ಮ ಧ್ಯೇಯವೂ ಆಗಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಇತರ ರಾಸಾಯನಿಕಗಳ ಬಳಕೆ ಹೆಚ್ಚುತ್ತಿರುವುದರಿಂದ ಭೂಮಿಯ ಫಲವತ್ತತೆ ಹಾಗೂ ಅಸ್ತಿತ್ವದ ಮೇಲೆ ಪರಿಣಾಮ ಬೀರುವ ಪರಿಸ್ಥಿತಿ ನಿರ್ಮಾಣವಾಗಿದೆ.ರಾಸಾಯನಿಕಗಳನ್ನು ಬಳಸಿಕೊಂಡು ಬೆಳೆಯುವ ಆಹಾರ ಪದಾರ್ಥಗಳ ಸೇವನೆಯಿಂದ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.ಆದ್ದರಿಂದ ರೈತರಿಗೆ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಿ,ವಿಷಮುಕ್ತ ಹಾಗೂ ಆರೋಗ್ಯಕರ ಆಹಾರ ಉತ್ಪಾದನೆಗೆ ಉತ್ತೇಜನ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಅಮರ್ ತಿಳಿಸಿದರು.
ಓರಿಯಂಟಲ್ ಕಿಸಾನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2013-14ನೇ ಸಾಲಿನಲ್ಲಿ 10 ಲಕ್ಷ ಷೇರು ಬಂಡವಾಳದೊಂದಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಕಾಯ್ದೆ-1997ರ ಅಡಿಯಲ್ಲಿ ಕೃಷಿಕರ ಹಿತದೃಷ್ಟಿಯಿಂದ ಕೃಷಿ ಪ್ರಧಾನ ಸಂಸ್ಥೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರಂಭವಾಯಿತು. ಅಂದಿನಿಂದ ರೈತರು ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಅಮರ್ ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಸಹಕಾರ ಸಂಘಗಳ ಉಪನಿಬಂಧಕ ಕೆ.ಎನ್.ನಾಗರಾಜ್ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ವಿಭಾಗೀಯ ವ್ಯವಸ್ಥಾಪಕ ವಿ. ಶ್ರೀಧರ್ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿ,ಅಧ್ಯಕ್ಷ ಅಮರ್ ಹಾಗೂ ಸೊಸೈಟಿಯ ಸದಸ್ಯರು ಸಾವಯವ ಕೃಷಿ ಪದ್ಧತಿಯ ಬಗ್ಗೆ ಹೊಂದಿರುವ ಕಾಳಜಿಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ಅಭಿವೃದ್ಧಿ ಅಧಿಕಾರಿ
ರಾಜೇಶ್,ಕೃಷಿ ತಜ್ಞ ಚಂದ್ರಶೇಖರ್,
ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕಿ ಶೈಲಜಾ ಹಾಗೂ ವೆಂಕಟರವಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ವೆಂಕಟಪತಿ, ಗೋಪಾಲ್,ನವೀನ್ ಕುಮಾರ್,ಮಂಜಪ್ಪ,ಸುರೇಶ್,ಮಂಜುನಾಥ್,ಮಮತಾ ಗೌಡ, ರಾಘವೇಂದ್ರ,ನಂಜೆರೆಡ್ಡಿ ಸೇರಿದಂತೆ ಸೊಸೈಟಿಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು. ( ಮುಬಷೀರ್ )

Written by

Bayalu Simha

Leave a Reply

Your email address will not be published. Required fields are marked *