Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಹಕಾರ ತತ್ವದ ಉದಾತ್ತ ಮೌಲ್ಯಗಳೊಂದಿಗೆ ಸಹಕಾರಿ ಮುನ್ನಡೆಯುತ್ತಿದೆ : ಆರ್ ರವಿಚಂದ್ರ

Share

ಯಲಹಂಕ : ಸಹಕಾರ ತತ್ವದ ಉದಾತ್ತ ಮೌಲ್ಯಗಳೊಂದಿಗೆ ಮುಂದೆ ಸಾಗುವುದೇ ಸಹಕಾರ ಸಂಘಗಳ ಮುಖ್ಯ ಧ್ಯೇಯವಾಗಿದ್ದು, ಈ ದಿಸೆಯಲ್ಲಿ ಶ್ರೀ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಾ, ಗ್ರಾಹಕರ ಹಿತ ಕಾಪಾಡುತ್ತಿದೆ ಎಂದು ಶ್ರೀ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಆರ್. ರವಿಚಂದ್ರ ಅಭಿಪ್ರಾಯಪಟ್ಟರು.

ಯಲಹಂಕ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಸೌಹಾರ್ದ ಸಹಕಾರಿಯ 16ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ವ್ಯಕ್ತಿಗಾಗಿ ಸಮಾಜ ಸಮಾಜಕ್ಕಾಗಿ ಸಹಕಾರ ಎಂಬ ತತ್ವದ ಅಡಿಯಲ್ಲಿ ಶ್ರೀ ಅಕ್ಷಯ ಸೌಹಾರ್ದ ಸಹಕಾರಿ ತನ್ನ ಸದಸ್ಯ ಬಂಧುಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದು, ಷೇರುದಾರರ ಮತ್ತು ಗ್ರಾಹಕರ ಪ್ರಶಂಸೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತು ಮೂಡಿಸಿರುವ ಸಹಕಾರಿಯೂ ತನ್ನ ಕಾರ್ಯ ವ್ಯಾಪ್ತಿಯನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸುವತ್ತ ಚಿಂತನೆ ನಡೆಸಿದ್ದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ವಾಗಿದೆ.

ಪ್ರಸಕ್ತ ಸಾಲಿನಲ್ಲಿ ನಮ್ಮ ಸಹಕಾರಿಯು ಠೇವಣಿ ಸಂಗ್ರಹ ಹಾಗೂ ಸಾಲ ವಸೂಲಾತಿಯಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಇದುವರೆಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಕಾರಿಯು ಈಗ ತನ್ನದೇ ಆದ ಸ್ವಂತ ಕಟ್ಟಡ ಹೊಂದಿದೆ. ಸಹಕಾರ ಕ್ಷೇತ್ರದ ಎಲ್ಲಾ ವಿಭಾಗಗಳಲ್ಲೂ ಉತ್ತಮ ಸಾಧನೆ ಮಾಡಿರುವ ನಮ್ಮ ಸಹಕಾರಿಯು ಮುಂದಿನ ದಿನಗಳಲ್ಲಿ ಸಂಘದ ಸದಸ್ಯರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು ಪೂರಕ ಸೌಲಭ್ಯಗಳನ್ನು ಒದಗಿಸುವ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುವತ್ತ ಧಾಪುಗಾಲು ಇಟ್ಟಿದೆ. ವಿಶೇಷವಾಗಿ ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಗುಡಿ ಕೈಗಾರಿಕೆಗಳ ಆರ್ಥಿಕ ಸುಧಾರಣೆಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲು ಸಹಕಾರಿ ಉದ್ದೇಶಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇಕಡಾ 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ, ಈ ಸಾಲಿನಲ್ಲಿ ಮರಣ ಹೊಂದಿದ ಸದಸ್ಯರ ಕುಟುಂಬಗಳಿಗೆ ಸಹಾಯಧನ ವಿತರಣೆ, ಸಾರ್ವಜನಿಕ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಸಾಮಾಜಿಕ ಜವಾಬ್ದಾರಿ ಮೆರೆದ ಗಣ್ಯರಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ವಿ.ಎಂ.ಕೆಂಪೇಗೌಡ, ಓಂಕಾರ್ ಕಾಲೇಜಿನ ಪ್ರಾಂಶುಪಾಲರಾದ ಜಿ.ಸುರೇಶ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಸಾಯಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಭದ್ರಯ್ಯ ಇವರನ್ನು ಅವರ ಸೇವೆಯನ್ನು ಸ್ಮರಿಸಿ ಸನ್ಮಾನಿಸಿ ಗೌರವಿಸಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಬೆಂಗಳೂರು ಪ್ರಾಂತ್ಯದ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಶ್ರೀ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷೆ ಮಂಗಳ, ಸಿಇಓ ಡಿ.ಎಸ್.ವೆಂಕಟಾಚಲಪತಿ, ನಿರ್ದೇಶಕರಾದ ಬಿ.ಆರ್.ಬೈರೇಗೌಡ, ಲತಾರಾಣಿ, ಹೆಚ್.ಜಿ.ಸರಸ್ವತಿ, ಎ.ಸಣ್ಣವೀರಣ್ಣ ಡಿ.ಸುರೇಶ್, ಶಿವಕುಮಾರ್ ಪಿ., ನಾರಾಯಣಗೌಡ ಕೆ.ಸಿ., ಚಂದ್ರಶೇಖರಯ್ಯ ಎಂ., ಟಿ.ಎಸ್.ಗೋವಿಂದಸ್ವಾಮಿ, ಆರ್.ಹನುಮಂತರಾಯ ನಾಗರತ್ನ, ಲತಾ, ಆದಿನಾರಾಯಣ ಸೇರಿದಂತೆ ಕಚೇರಿಯ ಸಿಬ್ಬಂದಿಗಳಿದ್ದರು.

Written by

Bayalu Simha

Leave a Reply

Your email address will not be published. Required fields are marked *